ನಮ್ಮ ಕರ್ನಾಟಕ ವೈಭವಕ್ಕೆ ಸ್ವಾಗತ, ಸುಸ್ವಾಗತ

ಕನ್ನಡ ನಾಡಿನ ಅಂದವ ನೋಡ, ಸಾಹಿತ್ಯ ಸಂಸ್ಕೃತಿಯ ಕಲೆಬೀಡ, ಕನ್ನಡ ನಾಡಿನ ಅಂದವ ಸವಿಯ ಬಾರ, ನೀ ಬಂದು ಒಮ್ಮೆ ನೋಡ ಬಾರ, -(ಮಾ.ಕೃ.ಮಂಜು) ಇದು ಕನ್ನಡ ನಾಡಿನ ದೇವಾಲಯಗಳು, ಪ್ರಸಿದ್ಧ ಸ್ಥಳಗಳನ್ನು ಪರಿಚಯಿಸುವ ತಾಣ. ಕರ್ನಾಟಕದ ವೈಭವವನ್ನು ಜಗತ್ತಿಗೆ ಪರಿಚಯಿಸುವ ಪುಟ್ಟ ಪ್ರಯತ್ನ.
ಬಂಧುಗಳೇ ನಿಮ್ಮ ಊರಿನ ಪ್ರಸಿದ್ಧವಾದ ಸ್ಥಳಗಳ, ದೇವಾಲಯಗಳ ಪೋಟೋಗಳನ್ನು/ಮಾಹಿತಿಗಳನ್ನು "ನಮ್ಮ ಕರ್ನಾಟಕ ವೈಭವ"ದಲ್ಲಿ ಮೂಡಿಬರಬೇಕೇ ಹಾಗಿದ್ದರೆ ನನಗೆ ಮೇಲ್ ಕಳುಹಿಸಿಕೊಡಿ.
ನನ್ನ ಮೇಲ್ : makrumanju@gmail.com

Thursday, March 26, 2009

ವಿಜಯನಗರ ಹಂಪಿ ವೈಭವ -೧














ಕರ್ನಾಟಕ ಪ್ರಸಿದ್ಧ ಸ್ಥಳ ಹಂಪೆ. ಇದು ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ಬಳಿ ಇರುವ ಈ ಊರು. ೧೩೩೬ರಿಂದ ೧೫೬೫ರವರೆಗೆ ಇದು ವಿಜಯನಗರ ಸಾಮ್ರಾಜ್ಯದ ರಾಜಧಾನಿ ಆಗಿತ್ತು. ಹಂಪೆಯ ಮೊದಲನೆ ಹೆಸರು 'ಪಂಪ' ಎಂದಿತ್ತು, ಅಂದರೆ ತುಂಗಭದ್ರ ನದಿ ಎಂದರ್ಥ. ವರ್ಷಗಳು ಕಳೆದಂತೆ ಇದು 'ವಿಜಯನಗರ' ಮತ್ತು 'ವಿರುಪಾಕ್ಷಪುರ' ಎಂದು ಕರೆಯಲ್ಪಟ್ಟಿತು. ಹಂಪೆಯನ್ನು ಯುನೆಸ್ಕೋವಿಶ್ವ ಪರಂಪರೆಯ ತಾಣ ಎಂದು ಘೋಷಿಸಿದೆ.
ವಿಜಯನಗರ ಸಾಮ್ರಾಜ್ಯದ ಅತೀ ಯಶಸ್ವಿ ಒಡೆಯನಾದ ಕೃಷ್ಣದೇವರಾಯನ ಕಾಲದಲ್ಲಿ ಹಂಪೆ ಬಜಾರ್ ಎಂದೆನ್ನಿಸಿ ಕೊಂಡ ಬೀದಿಯಲ್ಲಿ ವಜ್ರಾಭರಣಗಳನ್ನು ತೂಕದ ಮಾದರಿಯಲ್ಲಿ ಮಾರಲ್ಪಡುತ್ತಿದ್ದರಂತೆ. ಕೃಷ್ಣದೇವರಾಯನ ರಾಜ್ಯಭಾರ ಮುಗಿದ ನಂತರ ವಿಜಯನಗರ ಸಾಮ್ರಾಜ್ಯ ತನ್ನ ಪ್ರಾಬಲ್ಯವನ್ನು ನಿಧಾನವಾಗಿ ಕಳೆದು ಕೊಳ್ಳುತ್ತಾ ಬಂತು. ಕೊನೆಗೆತಾಳೀಕೋಟೆಯ ಯುದ್ಧದಲ್ಲಿ ಮುಸ್ಲಿಂ ಸಾಮ್ರಾಜ್ಯದಿಂದ ಬಂದ ಆಕ್ರಮಣವನ್ನು ತಡೆಯದೆ ಅಂತ್ಯಗೊಂಡಿತು. ಹಂಪೆಯಲ್ಲಿದ್ದ ಅನೇಕ ಸ್ಮಾರಕಗಳು ನಾಶವಾದವು.
ಇಂದು ವಿರೂಪಾಕ್ಷ ದೇವಾಲಯ, ಹಜಾರ ರಾಮ ದೇವಸ್ಥಾನ, ಸಪ್ತಸ್ವರ ಸಂಗೀತ ಹೊರಹೊಮ್ಮಿಸುವ ಕಲ್ಲಿನ ಕಂಭಗಳು, ವಿಶ್ವವಿಖ್ಯಾತ ಕಲ್ಲಿನ ರಥ,ಮಹಾನವಮಿ ದಿಬ್ಬ, ಸಾಸಿವೆ ಕಾಳು ಗಣಪತಿ, ಉಗ್ರ ನರಸಿಂಹ, ಕಮಲ ಮಹಲ್ , ಬಡವಿ ಲಿಂಗ, ಅನೆ ಲಾಯ ಹೀಗೆ ಹಲವಾರು ಪ್ರೇಕ್ಷಣಿಯ ಸ್ಥಳಗಳನ್ನು ಹಂಪಿಯಲ್ಲಿ ನೋಡಬಹುದಾಗಿದೆ



No comments:

Post a Comment